ADVERTISEMENT

ಗುಜರಾತ್‌ನಲ್ಲಿ ಟಾಟಾದಿಂದ ಸೆಮಿಕಂಡಕ್ಟರ್‌ ತಯಾರಿಕಾ ಘಟಕ ಸ್ಥಾಪನೆ

ಪಿಟಿಐ
Published 10 ಜನವರಿ 2024, 16:27 IST
Last Updated 10 ಜನವರಿ 2024, 16:27 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಅಹಮದಾಬಾದ್: ‘ಗುಜರಾತ್‌ನ ಧೋಲೆರಾದಲ್ಲಿ ಸೆಮಿಕಂಡಕ್ಟರ್‌ ತಯಾರಿಕಾ ಘಟಕ ಸ್ಥಾಪಿಸಲಾಗುವುದು’ ಎಂದು ಟಾಟಾ ಸಮೂಹದ ಮುಖ್ಯಸ್ಥ ಎನ್‌. ಚಂದ್ರಶೇಖರನ್ ಘೋಷಿಸಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಅವರು, ‘ಬೃಹತ್‌ ತಯಾರಿಕಾ ಘಟಕ ಸ್ಥಾಪನೆಗೆ ಟಾಟಾ ಸಮೂಹ ಬದ್ಧವಾಗಿದೆ. ಒಪ್ಪಂದ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಪ್ರಸಕ್ತ ವರ್ಷದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು’ ಎಂದರು.

ADVERTISEMENT

ಅಲ್ಲದೇ, ಗುಜರಾತ್‌ನ ಸಾನಂದ ನಗರದಲ್ಲಿ ಎರಡು ತಿಂಗಳೊಳಗೆ 20 ಗೀಗಾ ವಾಟ್‌ ಸಾಮರ್ಥ್ಯದ ಲೀಥಿಯಂ ಅಯಾನ್ ಬ್ಯಾಟರಿ ತಯಾರಿಕಾ ಘಟಕವನ್ನೂ ಆರಂಭಿಸಲಾಗುವುದು. ಇದು ದೇಶದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಉದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.