ನವದೆಹಲಿ: ಟಾಟಾ ಪವರ್ ಕಂಪನಿಯು ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹1,262 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹1,189 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 6ರಷ್ಟು ಹೆಚ್ಚಳವಾಗಿದೆ. ಹೆಚ್ಚಿದ ವರಮಾನದಿಂದ ಲಾಭದ ಪ್ರಮಾಣ ಏರಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ.
ಕಳೆದ ಜೂನ್ ತ್ರೈಮಾಸಿಕದಲ್ಲಿ ವರಮಾನವು ₹16,810 ಕೋಟಿಯಷ್ಟಿತ್ತು. ಈ ಬಾರಿ ₹17,464 ಕೋಟಿಗೆ ಹೆಚ್ಚಳವಾಗಿದೆ. ಜೂನ್ ತ್ರೈಮಾಸಿಕದಲ್ಲಿ 30 ಲಕ್ಷ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಕೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಪ್ರಸ್ತುತ ಕಂಪನಿಯು 1.3 ಕೋಟಿ ಬಳಕೆದಾರರನ್ನು ಹೊಂದಿದ್ದು, 2030ರ ವೇಳೆಗೆ 4 ಕೋಟಿ ಗ್ರಾಹಕರನ್ನು ಹೊಂದುವ ಗುರಿ ಹಾಕಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.