ನವದೆಹಲಿ: ‘ಟಾಟಾ ಎಲೆಕ್ಟ್ರಾನಿಕ್ಸ್‌ನಿಂದ ಅಸ್ಸಾಂನಲ್ಲಿ ₹27 ಸಾವಿರ ಕೋಟಿ ವೆಚ್ಚದಡಿ ನಿರ್ಮಿಸುತ್ತಿರುವ ಸೆಮಿಕಂಡಕ್ಟರ್ ಘಟಕವು ಮುಂದಿನ ವರ್ಷದಿಂದ ಕಾರ್ಯಾಚರಣೆ ಆರಂಭಿಸಲಿದೆ’ ಎಂದು ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ತಿಳಿಸಿದ್ದಾರೆ.
ಶನಿವಾರ ನಡೆದ ಘಟಕದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಘಟಕದಿಂದ 27 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಪೈಕಿ ನೇರವಾಗಿ 15 ಸಾವಿರ ಉದ್ಯೋಗಗಳು ಸೃಷ್ಟಿಯಾದರೆ, ಪರೋಕ್ಷವಾಗಿ 12 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಈಗಾಗಲೇ, ಅಸ್ಸಾಂನ ಒಂದು ಸಾವಿರ ಜನರಿಗೆ ಉದ್ಯೋಗ ನೀಡಲಾಗಿದೆ’ ಎಂದು ತಿಳಿಸಿದರು.
ಘಟಕದ ಕಾರ್ಯಾಚರಣೆಗೆ ಅಗತ್ಯವಿರುವ ಕಟ್ಟಡವನ್ನು ತ್ವರಿತವಾಗಿ ನಿರ್ಮಿಸಲು ಕ್ರಮವಹಿಸಲಾಗುವುದು. ಇದಕ್ಕೆ ಅಗತ್ಯವಿರುವ ನೆರವು ಒದಗಿಸಲಾಗುತ್ತಿದೆ ಎಂದರು.
ಸದ್ಯ ಸೆಮಿಕಂಡಕ್ಟರ್‌ಗಳನ್ನು ಪೂರೈಸುವ ಕಂಪನಿಗಳು ಹಂತ ಹಂತವಾಗಿ ದೇಶದಲ್ಲಿ ಘಟಕ ಸ್ಥಾಪಿಸುತ್ತವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.