ದಿ ಹೇಗ್: ನೆದರ್ಲೆಂಡ್‌ನ ಡಚ್ ಘಟಕಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶೇ 15ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಭಾರತದ ಟಾಟಾ ಸ್ಟೀಲ್ ಕಂಪನಿ ನಿರ್ಧರಿಸಿದೆ.
ಈ ಘಟಕಗಳಲ್ಲಿ ಒಟ್ಟು 9,200 ಉದ್ಯೋಗಿಗಳಿದ್ದಾರೆ. ಈ ಪೈಕಿ 1,600 ಉದ್ಯೋಗಿಗಳನ್ನು ಕಡಿತ ಮಾಡಲಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಯುರೋಪಿಯನ್ ಒಕ್ಕೂಟ ಸೇರಿ ವಿವಿಧ ದೇಶಗಳ ಮೇಲೆ ಸುಂಕ ಹೆಚ್ಚಳ ಮಾಡಿದ್ದಾರೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ವ್ಯಾಪಾರದ ಬಿಕ್ಕಟ್ಟು ಸೃಷ್ಟಿಸಿದ್ದು, ಕಂಪನಿಯ ಉತ್ಪನ್ನಗಳಿಗೆ ಬೇಡಿಕೆ ತಗ್ಗಿಸಿದೆ. ಕಾರ್ಯಾಚರಣೆ ವೆಚ್ಚ ಮತ್ತು ಹಣಕಾಸಿನ ಮೇಲೆ ಪರಿಣಾಮ ಬೀರಿದ್ದರಿಂದ ಸಿಬ್ಬಂದಿ ಕಡಿತಕ್ಕೆ ಮುಂದಾಗಿರುವುದಾಗಿ ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.