ADVERTISEMENT

2024–25ನೇ ಆರ್ಥಿಕ ವರ್ಷದ ಐಟಿಆರ್‌–2 ಸಲ್ಲಿಕೆ ಆರಂಭ

ಪಿಟಿಐ
Published 18 ಜುಲೈ 2025, 13:44 IST
Last Updated 18 ಜುಲೈ 2025, 13:44 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ನೇ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳು ಮತ್ತು ಹಿಂದೂ ಅವಿಭಕ್ತ ಕುಟುಂಬಗಳು (ಎಚ್‌ಯುಎಫ್‌) ಐಟಿಆರ್‌–2 ಅನ್ನು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಶುಕ್ರವಾರ ತಿಳಿಸಿದೆ.

ಇ–ಫೈಲಿಂಗ್ ಪೋರ್ಟಲ್‌ ಮೂಲಕ ಐಟಿಆರ್–2 ಫಾರ್ಮ್‌ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ನಮೂನೆಯಡಿ ಅರ್ಹ ತೆರಿಗೆದಾರರು ರಿಟರ್ನ್ಸ್ ಸಲ್ಲಿಸಬಹುದಾಗಿದೆ ಎಂದು ಇಲಾಖೆ ‘ಎಕ್ಸ್‌’ನಲ್ಲಿ ತಿಳಿಸಿದೆ.

ಸರ್ಕಾರವು ಈಗಾಗಲೇ 2025-26ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿ ಐಟಿಆರ್‌ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.