ADVERTISEMENT

ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭದ ಮೇಲಿನ ತೆರಿಗೆ ಹೆಚ್ಚಳ

ಪಿಟಿಐ
Published 15 ಅಕ್ಟೋಬರ್ 2022, 15:41 IST
Last Updated 15 ಅಕ್ಟೋಬರ್ 2022, 15:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಕೇಂದ್ರ ಸರ್ಕಾರ ಹೆಚ್ಚಳ ಮಾಡಿದೆ. ಡೀಸೆಲ್‌ ಮತ್ತು ವಿಮಾನ ಇಂಧನದ (ಎಟಿಎಫ್‌) ರಫ್ತು ಮೇಲಿನ ತೆರಿಗೆಯನ್ನು ಸಹ ಹೆಚ್ಚಿಸಲಾಗಿದೆ.

ಸರ್ಕಾರದ ಅಧಿಸೂಚನೆಯ ಪ್ರಕಾರ, ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಭಾನುವಾರದಿಂದ ಜಾರಿಗೆ ಬರುವಂತೆ ಪ್ರತಿ ಟನ್‌ಗೆ ₹11 ಸಾವಿರಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು ₹ 8 ಸಾವಿರ ಇತ್ತು.

ಡೀಸೆಲ್‌ ರಫ್ತು ಮೇಲಿನ ತೆರಿಗೆಯನ್ನು ಪ್ರತಿ ಲೀಟರಿಗೆ ₹ 5 ರಿಂದ ₹12ಕ್ಕೆ ಹಾಗೂ ವಿಮಾನ ಇಂಧನದ (ಎಟಿಎಫ್‌) ರಫ್ತು ಮೇಲಿನ ತೆರಿಗೆಯನ್ನು ಲೀಟರಿಗೆ ₹3.50ಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು ಎಟಿಎಫ್‌ ರಫ್ತು ಮೇಲಿನ ತೆರಿಗೆ ಕೈಬಿಡಲಾಗಿತ್ತು.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ ಆಗಿರುವುದರಿಂದ ತೆರಿಗೆ ದರದಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.