ಮುಂಬೈ: ದೇಶದ ಅತಿದೊಡ್ಡ ಐ.ಟಿ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ತನ್ನ ಬಹುತೇಕ ಉದ್ಯೋಗಿಗಳ ವೇತನವನ್ನು ಶೇ 4.5ರಿಂದ ಶೇ 7ರ ವರೆಗೆ ಹೆಚ್ಚಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಉದ್ಯೋಗಿಗಳಿಗೆ ವೇತನ ಹೆಚ್ಚಳದ ಪತ್ರವನ್ನು ನೀಡಿರುವ ಕಂಪನಿ, ವೇತನ ಏರಿಕೆಯು ಸೆಪ್ಟೆಂಬರ್‌ನಿಂದ ಅನ್ವಯವಾಗಲಿದೆ ಎಂದು ತಿಳಿಸಿವೆ. ಉತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಶೇ 10ಕ್ಕಿಂತ ಹೆಚ್ಚಿನ ವೇತನ ನೀಡಿದೆ.
ಕಳೆದ ತಿಂಗಳು ತನ್ನ ಸಿಬ್ಬಂದಿಯಲ್ಲಿ 12 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಹೇಳಿತ್ತು. ಬಳಿಕ ಶೇ 80ರಷ್ಟು ಉದ್ಯೋಗಿಗಳಿಗೆ ವೇತನ ಹೆಚ್ಚಳ ಮಾಡುವುದಾಗಿ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.