ನವದೆಹಲಿ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಕಂಪನಿಯೊಂದಿಗೆ ಸಚಿವಾಲಯವು ಸಂಪರ್ಕದಲ್ಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸೋಮವಾರ ತಿಳಿಸಿದೆ.
ಟಿಸಿಎಸ್ ಕಂಪನಿಯು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಹೇಳಿರುವ ನಿರ್ಧಾರವು ಕಳವಳ ಮೂಡಿಸಿದೆ. ಯಾವ ಕಾರಣಕ್ಕಾಗಿ ಈ ಕ್ರಮ ಕೈಗೊಂಡಿದೆ ಎಂದು ಪರಿಶೀಲಿಸಲಾಗುವುದು. ಸರ್ಕಾರವು ಈ ಬೆಳವಣಿಗೆ ಬಗ್ಗೆ ತೀವ್ರ ನಿಗಾ ವಹಿಸಿದ್ದು, ಕಂಪನಿ ಜೊತೆ ಸಂಪರ್ಕದಲ್ಲಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶದ ಅತಿದೊಡ್ಡ ಐ.ಟಿ ಸೇವಾ ಪೂರೈಕೆದಾರ ಕಂಪನಿ ಟಿಸಿಎಸ್ ತನ್ನ 12 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ನಿರ್ಧರಿಸಿರುವುದಾಗಿ ಭಾನುವಾರ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.