ನವದೆಹಲಿ: ದೇಶದ ಅತಿದೊಡ್ಡ ಸಾಫ್ಟ್‌ವೇರ್ ಸೇವಾ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಸೆಪ್ಟೆಂಬರ್ ತ್ರೈಮಾಸಿಕದ ನಿವ್ವಳ ಲಾಭದಲ್ಲಿ ಶೇಕಡ 14.1ರಷ್ಟು ಏರಿಕೆ ಆಗಿದೆ. ಕಂಪನಿಯು ₹ 9,624 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 8,433 ಕೋಟಿ ನಿವ್ವಳ ಲಾಭ ದಾಖಲಿಸಿತ್ತು. ಕಂಪನಿಯು ಷೇರುದಾರರಿಗೆ ಪ್ರತಿ ಷೇರಿಗೆ ₹ 7ರ ಮಧ್ಯಂತರ ಡಿವಿಡೆಂಡ್ ಘೋಷಿಸಿದೆ. ಈ ತ್ರೈಮಾಸಿಕದಲ್ಲಿ ಕಂಪನಿಯು 19,690 ಜನರನ್ನು ನೇಮಕ ಮಾಡಿಕೊಂಡಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಖ್ಯೆ 5.28 ಲಕ್ಷ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.