ಮುಂಬೈ: ದೇಶದ ಅತಿದೊಡ್ಡ ಐ.ಟಿ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು ₹12,380 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹11,058 ಕೋಟಿ ಲಾಭ ಗಳಿಸಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 11.95ರಷ್ಟು ಏರಿಕೆಯಾಗಿದೆ ಎಂದು ಕಂಪನಿ ತಿಳಿಸಿದೆ.
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹11,909 ಕೋಟಿ ಲಾಭ ಗಳಿಸಿತ್ತು.
ವರಮಾನದಲ್ಲಿ ಶೇ 5.6ರಷ್ಟು ಏರಿಕೆಯಾಗಿದ್ದು, ಒಟ್ಟು ₹63,973 ಕೋಟಿ ಆಗಿದೆ.
ಅಕ್ಟೋಬರ್‌ನಿಂದ ಡಿಸೆಂಬರ್ ಅವಧಿಯಲ್ಲಿ 5 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕಂಪನಿಯನ್ನು ತೊರೆದಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಒಟ್ಟು 6.07 ಲಕ್ಷ ಉದ್ಯೋಗಿಗಳು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.