ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಮೇ 12ಕ್ಕೆ ಕೊನೆಗೊಂಡ ವಾರದಲ್ಲಿ ₹29,110 ಕೋಟಿ ಹೆಚ್ಚಾಗಿ ₹49.16 ಲಕ್ಷ ಕೋಟಿಗೆ ಏರಿಕೆ ಆಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ಹೇಳಿದೆ.
ಅದಕ್ಕೂ ಹಿಂದಿನ ವಾರದಲ್ಲಿ ಮೀಸಲು ಸಂಗ್ರಹವು ₹48.87 ಲಕ್ಷ ಕೋಟಿಗೆ ತಲುಪಿತ್ತು.
ಮೀಸಲು ಸಂಗ್ರಹದಲ್ಲಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹವು ₹29,274 ಕೋಟಿಯಷ್ಟು ಹೆಚ್ಚಾಗಿ ₹43.42 ಲಕ್ಷ ಕೋಟಿಗೆ ತಲುಪಿದೆ ಎಂದು ಆರ್ಬಿಐ ತಿಳಿಸಿದೆ.
ಚಿನ್ನದ ಮೀಸಲು ಸಂಗ್ರಹ ₹314 ಕೋಟಿ ಹೆಚ್ಚಾಗಿ ₹3.80 ಲಕ್ಷ ಕೋಟಿಗೆ ತಲುಪಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಮೀಸಲು ಸಂಗ್ರಹವು ₹231 ಕೋಟಿಯಷ್ಟು ಕಡಿಮೆ ಆಗಿ ₹42,312 ಕೋಟಿಯಷ್ಟಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.