ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 59 ಪೈಸೆ ಕುಸಿದಿದೆ. ಪ್ರತೀ ಡಾಲರ್ ಮೌಲ್ಯ ₹86.11 ಆಗಿದೆ.
ಇರಾನ್‌ನ ಮೇಲೆ ಇಸ್ರೇಲ್ ದಾಳಿಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಏರಿಕೆಗೊಂಡಿದೆ. ಅಲ್ಲದೆ, ದೇಶದ ಷೇರು ಸೂಚ್ಯಂಕಗಳ ಇಳಿಕೆ ಮತ್ತು ವಿದೇಶಿ ಬಂಡವಾಳ ಹೊರಹರಿವು ರೂಪಾಯಿ ಮೌಲ್ಯ ಕಡಿಮೆಯಾಗಲು ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಗುರುವಾರ ನಡೆದ ವಹಿವಾಟಿನಲ್ಲಿ ಪ್ರತೀ ಡಾಲರ್ ಮೌಲ್ಯ ₹85.52 ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.