ವಾಷಿಂಗ್ಟನ್: ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವ ಬ್ಯಾಂಕ್ ಶೇ 6.9ಕ್ಕೆ ಏರಿಕೆ ಮಾಡಿದೆ.
ಕಳೆದ ಅಕ್ಟೋಬರ್‌ನಲ್ಲಿ ಭಾರತದ ಜಿಡಿಪಿ ದರ ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿತ್ತು.
ಭಾರತ ಮತ್ತು ಉಳಿದೆಲ್ಲಾ ದೇಶಗಳಿಗೆ ಜಾಗತಿಕ ಪರಿಸ್ಥಿತಿಯು ಅನುಕೂಲಕರವಾಗಿ ಇಲ್ಲ. ಹೀಗಾಗಿ ಬೆಳವಣಿಗೆ ಅಂದಾಜನ್ನು ತಗ್ಗಿಸಲಾಗಿದೆ ಎಂದು ಅದು ಹೇಳಿತ್ತು.
ಸೌತ್ ಏಷ್ಯಾ ಎಕನಾಮಿಕ್ ಫೋಕಸ್ ವರದಿಯನ್ನು ಬಿಡುಗಡೆ ಮಾಡಿದ್ದು, ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಭಾರತವು ಅತ್ಯಂತ ವೇಗವಾಗಿ ಚೇತರಿಕೆ ಕಂಡುಕೊಳ್ಳುತ್ತಿದೆ ಎಂದು ವಿಶ್ವಬ್ಯಾಂಕ್ ತಿಳಿಸಿತ್ತು.
ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.