ಮುಂಬೈ: ವಹಿವಾಟು ವಿಸ್ತರಣೆಯ ಭಾಗವಾಗಿ ಐದು ವರ್ಷಗಳಲ್ಲಿ 3 ಸಾವಿರಕ್ಕೂ ಅಧಿಕ ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗುವುದು ಎಂದು ಟೈಟಾನ್ ಕಂಪನಿ ಮಂಗಳವಾರ ತಿಳಿಸಿದೆ.
ಐದು ವರ್ಷದೊಳಗೆ ₹1 ಲಕ್ಷ ಕೋಟಿ ಮೌಲ್ಯದ ವಹಿವಾಟು ನಡೆಸುವ ಗುರಿ ಇಟ್ಟುಕೊಂಡಿದ್ದು, ಅದಕ್ಕಾಗಿ ಈ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ದತ್ತಾಂಶ ವಿಶ್ಲೇಷಣೆ, ಸೈಬರ್ ಭದ್ರತೆ, ಉತ್ಪನ್ನ ನಿರ್ವಹಣೆ, ಡಿಜಿಟಲ್ ಮಾರ್ಕೆಟಿಂಗ್ಗೆ ಸಂಬಂಧಿಸಿಂತೆ ವಿಶೇಷ ಕೌಶಲ ಹೊಂದಿರುವ ವೃತ್ತಿಪರರನ್ನು ನೇಮಿಸಿಕೊಳ್ಳಲಾಗುವುದು ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.