ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ನವದೆಹಲಿ: ವಿವಿಧ ಕಾರ್ಮಿಕ ಸಂಘಟನೆಗಳ ಜೊತೆ ಗುರುತಿಸಿಕೊಂಡಿರುವ 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾರತ್ ಬಂದ್‌ಗೆ ಕರೆ ನೀಡಿರುವ ಪರಿಣಾಮವಾಗಿ ಬ್ಯಾಂಕಿಂಗ್, ಅಂಚೆ ಹಾಗೂ ಇತರ ಕೆಲವು ಸೇವೆಗಳಿಗೆ ಬುಧವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ ಬಂದ್‌ಗೆ ಕರೆ ನೀಡಲಾಗಿದೆ.
ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಬೇಕು, ಗುತ್ತಿಗೆ ಪದ್ಧತಿ ಕೊನೆಗೊಳಿಸಬೇಕು, ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಕನಿಷ್ಠ ವೇತನವನ್ನು ₹26 ಸಾವಿರಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಯನ್ನು ಸಿಐಟಿಯು, ಐಎನ್‌ಟಿಯುಸಿ ಮತ್ತು ಎಐಟಿಯುಸಿ ಸಂಘಟನೆಗಳು ಸರ್ಕಾರದ ಮುಂದಿರಿಸಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೂಡ ಬಂದ್‌ಗೆ ಬೆಂಬಲ ಸೂಚಿಸಿದೆ.
ಆದರೆ, ಆರ್‌ಎಸ್‌ಎಸ್‌ನ ಭಾರತೀಯ ಮಜ್ದೂರ್ ಸಂಘವು (ಬಿಎಂಎಸ್) ಬಂದ್‌ಗೆ ಬೆಂಬಲ ನೀಡಿಲ್ಲ. ಈ ಬಂದ್ ರಾಜಕೀಯ ಪ್ರೇರಿತ ಎಂದು ಅದು ಹೇಳಿದೆ.
ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯಲಿವೆ. ಬ್ಯಾಂಕಿಂಗ್, ಅಂಚೆ ಮತ್ತು ಸರ್ಕಾರಿ ಸ್ವಾಮ್ಯದ ಕಂಪನಿಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.