ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ಇದೇ 8ರಂದು ‘ಭಾರತ್ ಬಂದ್’ ನಡೆಸುವುದಾಗಿ ಕಾರ್ಮಿಕ ಸಂಘಟನೆಗಳು ಪ್ರಕಟಿಸಿವೆ.
ಕೇಂದ್ರ ಕಾರ್ಮಿಕ ಸಚಿವಾಲಯವು ಗುರುವಾರ ಕರೆದಿದ್ದ ಸಭೆಯಲ್ಲಿ ಕಾರ್ಮಿಕ ಸಂಘಟನೆಗಳು ಮುಂದಿಟ್ಟಿದ್ದ ಬೇಡಿಕೆಗಳ ಬಗ್ಗೆ ಯಾವುದೇ ಭರವಸೆ ದೊರೆತಿಲ್ಲ. ಹೀಗಾಗಿ ಒಂದು ದಿನದ ಮಟ್ಟಿಗೆ ಸಾರ್ವತ್ರಿಕ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಹತ್ತು ಕಾರ್ಮಿಕ ಸಂಘಟನೆಗಳು ನೀಡಿರುವ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.