ADVERTISEMENT

ಟ್ರೈನಿಗಳ ವಜಾ | ಇನ್ಫೊಸಿಸ್‌ ವಿರುದ್ಧ ಪ್ರತಿಭಟನೆ: ಐ.ಟಿ ಸಂಘಟನೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2025, 13:01 IST
Last Updated 27 ಫೆಬ್ರುವರಿ 2025, 13:01 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮೈಸೂರಿನ ಇನ್ಫೊಸಿಸ್‌ ಕ್ಯಾಂಪಸ್‌ನಲ್ಲಿ 300ಕ್ಕೂ ಹೆಚ್ಚು ಟ್ರೈನಿಗಳನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಪುಣೆ ಮೂಲದ ಐ.ಟಿ ಉದ್ಯೋಗಿಗಳ ಕ್ಷೇಮಾಭಿವೃದ್ಧಿ ಸಂಘವಾದ ಎನ್‌ಐಟಿಇಎಸ್‌ ತಿಳಿಸಿದೆ.

ಸರ್ಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಇಲ್ಲವಾದರೆ ಟ್ರೈನಿಗಳ ಜೊತೆಗೂಡಿ ಹೋರಾಟ ನಡೆಸಲಾಗುವುದು ಎಂದು ಹೇಳಿದೆ.

‘‌ವಜಾಗೊಂಡಿರುವ ಉದ್ಯೋಗಿಗಳಿಗೆ ನ್ಯಾಯಸಮ್ಮತವಾಗಿ ನೀಡಬೇಕಿರುವ ಸೌಲಭ್ಯ ಕಲ್ಪಿಸಬೇಕಿದೆ. ನಿರ್ಲಕ್ಷ್ಯವಹಿಸಿದರೆ ಕ್ಯಾಂಪಸ್‌ ಮುಂಭಾಗದಲ್ಲಿ ಬೃಹತ್‌ ಹೋರಾಟ ನಡೆಸಲು ಹಿಂಜರಿಯುವುದಿಲ್ಲ’ ಎಂದು ಹೇಳಿದೆ.

ADVERTISEMENT

ಸ್ಪಷ್ಟನೆ: ನ್ಯಾಯಸಮ್ಮತವಾಗಿಯೇ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಆಂತರಿಕ ಮೌಲ್ಯಮಾಪನದಲ್ಲಿ ಅನುತ್ತೀರ್ಣರಾಗಿರುವ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಅವರಿಗೆ ನಿಗದಿಪಡಿಸಿದ್ದ ಹಣವನ್ನು ಪಾವತಿಸಲಾಗಿದೆ. ಈಗಾಗಲೇ, ಶೇ 98ರಷ್ಟು ಉದ್ಯೋಗಿಗಳಿಗೆ ಕೆಲಸದಿಂದ ಬಿಡುಗಡೆಗೊಳಿಸಿರುವ ಪತ್ರ ನೀಡಲಾಗಿದೆ ಎಂದು ಇನ್ಫೊಸಿಸ್‌ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.