ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಖರೀದಿ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ.
‘ಇಲ್ಲಿಯವರೆಗೂ ಹೆಸರು ನೋಂದಣಿ ಮಾಡಿಕೊಳ್ಳದ ರೈತರು ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲ್ಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್‌ಗೆ ₹7,550 ಬೆಲೆ ನಿಗದಿಪಡಿಸಿದೆ. ರಾಜ್ಯ ಸರ್ಕಾರ ₹450 ಪ್ರೋತ್ಸಾಹ ಧನ ಘೋಷಿಸಿದೆ. ಕೆಲವು ಕಡೆ ಪ್ರೋತ್ಸಾಹ ಧನವು ಬಿಲ್‌ನಲ್ಲಿ ಸೇರ್ಪಡೆಯಾಗುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಇದನ್ನು ಸರಿಪಡಿಸಲಾಗಿದೆ. ರೈತರಿಗೆ ಕ್ವಿಂಟಲ್‌ಗೆ ₹8 ಸಾವಿರ ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.