ಬೆಂಗಳೂರು: ಬ್ಯಾಂಕೇತರ ಹಣಕಾಸು ಕಂಪನಿ ಟಿವಿಎಸ್ ಕ್ರೆಡಿಟ್ ಸರ್ವಿಸಸ್ ಲಿಮಿಟೆಡ್, ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ₹181 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹140 ಕೋಟಿ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭ ಶೇ 29ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿ ತಿಳಿಸಿದೆ.
ಒಟ್ಟು ವರಮಾನವು ₹1,697 ಕೋಟಿಯಾಗಿದೆ. ಸಾಲ ನೀಡಿಕೆ ಪ್ರಮಾಣದಲ್ಲಿ ಶೇ 12ರಷ್ಟು ಹೆಚ್ಚಳವಾಗಿದೆ. ಒಟ್ಟು ಸಾಲಗಳ ನಿರ್ವಹಣಾ ಮೌಲ್ಯವು (ಎಯುಎಂ) ₹26,898 ಕೋಟಿಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.