ಬೆಂಗಳೂರು: ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿರುವ (ಎನ್ಬಿಎಫ್ಸಿ) ಟಿವಿಎಸ್ ಕ್ರೆಡಿಟ್ ಸರ್ವಿಸಸ್ ಲಿಮಿಟೆಡ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 96 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಕಂಪನಿಯು ತ್ರೈಮಾಸಿಕವೊಂದರಲ್ಲಿ ದಾಖಲಿಸಿರುವ ಅತಿಹೆಚ್ಚಿನ ಲಾಭ.
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 962 ಕೋಟಿ ವರಮಾನ ಗಳಿಸಿದೆ. ಇದು ಹಿಂದಿನ ವರ್ಷದ ಇದೇ ತ್ರೈಮಾಸಿಕದ ವರಮಾನಕ್ಕೆ ಹೋಲಿಸಿದರೆ ಶೇಕಡ 46ರಷ್ಟು ಹೆಚ್ಚು ಎಂದು ಪ್ರಕಟಣೆ ತಿಳಿಸಿದೆ.
ಹಿಂದಿನ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ₹ 26 ಕೋಟಿ ಲಾಭ ಗಳಿಸಿತ್ತು. ಅಂದಿನ ಲಾಭಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣವು ಶೇ 264ರಷ್ಟು ಹೆಚ್ಚಳ ಕಂಡಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.