ADVERTISEMENT

ಟಿವಿಎಸ್ ಲಾಭ ಶೇ 46ರಷ್ಟು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 16:15 IST
Last Updated 28 ಜನವರಿ 2026, 16:15 IST
.
.   

ನವದೆಹಲಿ: ಡಿಸೆಂಬರ್ ತ್ರೈಮಾಸಿಕದಲ್ಲಿ ವಾಹನ ತಯಾರಿಕಾ ಕಂಪನಿ ಟಿವಿಎಸ್ ಮೋಟರ್‌ ಲಾಭ ಶೇ 46ರಷ್ಟು ಹೆಚ್ಚಳವಾಗಿದೆ.

ಕಳೆದ ಆರ್ಥಿಕ ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಯು ₹609 ಕೋಟಿ ಲಾಭ ಗಳಿಸಿತ್ತು. ಅದು ಈ ಬಾರಿ ₹891 ಕೋಟಿಗೆ ಏರಿಕೆಯಾಗಿದೆ ಎಂದು ಕಂಪನಿ ಷೇರುಪೇಟೆಗೆ ಬುಧವಾರ ತಿಳಿಸಿದೆ.

2024ರ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ವರಮಾನವು ₹11,034 ಕೋಟಿಯಷ್ಟಿತ್ತು. ಅದು ಈ ಬಾರಿ ₹14,755 ಕೋಟಿಗೆ ಏರಿಕೆಯಾಗಿದೆ. ಒಟ್ಟು ವೆಚ್ಚವು ₹10,175 ಕೋಟಿಯಿಂದ ₹13,369 ಕೋಟಿಗೆ ಹೆಚ್ಚಳವಾಗಿದೆ.

ADVERTISEMENT

ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಮಾರಾಟದಲ್ಲಿ ಶೇ 27ರಷ್ಟು ಹೆಚ್ಚಳವಾಗಿದ್ದು, 15.44 ಲಕ್ಷ ವಾಹನಗಳು ಮಾರಾಟವಾಗಿವೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.