ADVERTISEMENT

ಕೋವಿಡ್ ಪರಿಹಾರಕ್ಕೆ ಟಿವಿಎಸ್‌ನಿಂದ ₹ 40 ಕೋಟಿ ನೆರವು

​ಪ್ರಜಾವಾಣಿ ವಾರ್ತೆ
Published 7 ಮೇ 2021, 19:22 IST
Last Updated 7 ಮೇ 2021, 19:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಟಿವಿಎಸ್‌ ಮೋಟರ್‌ ಕಂಪನಿಯು ಸುಂದರಂ ಕ್ಲೇಟನ್‌ ಮತ್ತು ತನ್ನ ಸಮೂಹದ ಇತರ ಕಂಪನಿಗಳ ಜೊತೆಯಾಗಿ ಕೋವಿಡ್–19 ಪರಿಹಾರ ಕಾರ್ಯಗಳಿಗೆ ₹ 40 ಕೋಟಿ ವಿನಿಯೋಗಿಸಲಿದೆ.

ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳು, ಪಿಪಿಇ ಕಿಟ್‌ಗಳು, ಔಷಧಗಳನ್ನು ನೀಡಲು ಈ ಹಣವನ್ನು ಬಳಸಿಕೊಳ್ಳಲಾಗುತ್ತದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಕಂಪನಿಯು ಒಟ್ಟು ಎರಡು ಸಾವಿರ ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳನ್ನು ಆಸ್ಪತ್ರೆಗಳಿಗೆ ನೀಡಲಿದೆ. ತಮಿಳುನಾಡು, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಅಗತ್ಯ ಸೇವೆಗಳ ವಲಯಗಳಲ್ಲಿ ಕೆಲಸ ಮಾಡುವವರಿಗೆ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಆಹಾರದ ಪೊಟ್ಟಣ ವಿತರಿಸಲಿದೆ.

ADVERTISEMENT

‘ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಕೇಂದ್ರಗಳಿಗೆ ನೆರವು ನೀಡಲು ನಾವು ಸರ್ಕಾರದ ಜೊತೆ ಕೆಲಸ ಮಾಡುತ್ತಿದ್ದೇವೆ’ ಎಂದು ಟಿವಿಎಸ್ ಮೋಟರ್‌ ಕಂಪನಿಯ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.