ADVERTISEMENT

ಇಂದಿನಿಂದ ಎರಡು ದಿನ ಬ್ಯಾಂಕ್‌ ಮುಷ್ಕರ

ಪಿಟಿಐ
Published 30 ಜನವರಿ 2020, 19:45 IST
Last Updated 30 ಜನವರಿ 2020, 19:45 IST
   

ನವದೆಹಲಿ: ಬ್ಯಾಂಕ್‌ ನೌಕರರ ಸಂಘಟನೆಗಳು ದೇಶದಾದ್ಯಂತಎರಡು ದಿನಗಳ ಮುಷ್ಕರ ನಡೆಸಲಿರುವುದರಿಂದ ಶುಕ್ರವಾರ ಮತ್ತು ಶನಿವಾರ ಬ್ಯಾಂಕಿಂಗ್‌ ವಹಿವಾಟಿಗೆ ತೀವ್ರ ಧಕ್ಕೆ ಒದಗಲಿದೆ.

ವೇತನ ಹೆಚ್ಚಳಕ್ಕೆ ಸಂಬಂಧಿಸಿದ ಮಾತುಕತೆ ವಿಫಲವಾಗಿರುವುದರಿಂದ ಒಂಬತ್ತು ಬ್ಯಾಂಕ್‌ ಕಾರ್ಮಿಕ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಈ ಮುಷ್ಕರಕ್ಕೆ ಕರೆ ನೀಡಿದೆ. ಠೇವಣಿ ಇರಿಸುವ, ಹಣ ಹಿಂದೆ ಪಡೆಯುವ, ಚೆಕ್‌ ಕ್ಲಿಯರನ್ಸ್, ಸಾಲ ವಿತರಣೆ ಮತ್ತಿತರ ವಹಿವಾಟಿಗೆ ಧಕ್ಕೆ ಒದಗಲಿದೆ. ಖಾಸಗಿ ವಲಯದ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT