ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದಲ್ಲಿ ದ್ವಿಚಕ್ರ ವಾಹನಗಳ ಮಾರಾಟವು ಶೇ 6ರಿಂದ ಶೇ 9ರಷ್ಟು ಏರಿಕೆ ಕಾಣುವ ನಿರೀಕ್ಷೆ ಇದೆ ಎಂದು ರೇಟಿಂಗ್ ಸಂಸ್ಥೆ ಐಸಿಆರ್‌ಎ ಸೋಮವಾರ ಹೇಳಿದೆ.
ನಗರ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಬಳಕೆ ಪ್ರಮಾಣ ಹೆಚ್ಚಳವಾಗಿದೆ. ಮುಂಗಾರು ಮಳೆಯು ಚೆನ್ನಾಗಿ ಆಗಿರುವುದರಿಂದಾಗಿ ಗ್ರಾಮೀಣ ಭಾಗದಲ್ಲಿನ ಜನರ ಆದಾಯ ಹೆಚ್ಚಿದೆ. ಜಿಎಸ್‌ಟಿ ದರ ಇಳಿಕೆಯ ಸಾಧ್ಯತೆಯು ವಾಹನಗಳ ಮಾರಾಟ ಹೆಚ್ಚಳಕ್ಕೆ ಕಾರಣ ಆಗಬಹುದು ಎಂದು ಅದು ತಿಳಿಸಿದೆ.
ಜುಲೈ ತಿಂಗಳಿನಲ್ಲಿ ದೇಶೀಯವಾಗಿ ವಾಹನಗಳ ಸಗಟು ಮಾರಾಟ ಶೇ 9ರಷ್ಟು ಏರಿಕೆಯಾಗಿದ್ದು, 15 ಲಕ್ಷ ವಾಹನಗಳು ಮಾರಾಟವಾಗಿವೆ. ಆದರೆ, ಚಿಲ್ಲರೆ ಮಾರಾಟವು ಶೇ 6.5ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.