
ಪಿಟಿಐ
ಕೋಲ್ಕತ್ತ: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್‌ನ ಒಟ್ಟು ವ್ಯವಹಾರವು ₹5.54 ಲಕ್ಷ ಕೋಟಿಯಷ್ಟಾಗಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ನ ಒಟ್ಟು ವ್ಯವಹಾರ ₹4.89 ಲಕ್ಷ ಕೋಟಿಯಷ್ಟಾಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 13ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್ ಶುಕ್ರವಾರ ತಿಳಿಸಿದೆ.
ಬ್ಯಾಂಕ್‌ನ ಒಟ್ಟು ಸಾಲ ನೀಡಿಕೆಯಲ್ಲಿ ಶೇ 16ರಷ್ಟು ಏರಿಕೆಯಾಗಿದ್ದು, ₹2.43 ಲಕ್ಷ ಕೋಟಿ ಸಾಲ ನೀಡಿದೆ. ಒಟ್ಟು ಠೇವಣಿಯು ₹2.80 ಲಕ್ಷ ಕೋಟಿಯಿಂದ ₹3.10 ಲಕ್ಷ ಕೋಟಿಗೆ ಹೆಚ್ಚಳವಾಗಿದೆ.
ಚಾಲ್ತಿ ಖಾತೆ ಮತ್ತು ಉಳಿತಾಯ ಖಾತೆ (ಸಿಎಎಸ್‌ಎ) ಅನುಪಾತವು ಶೇ 38.41ರಷ್ಟಾಗಿದೆ. ಸಾಲ ಮತ್ತು ಠೇವಣಿ ಅನುಪಾತವು ಶೇ 78.61 ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.