ಕೋಲ್ಕತ್ತ: ಸರ್ಕಾರಿ ಸ್ವಾಮ್ಯದ ಯುಕೊ ಬ್ಯಾಂಕ್ 2024–25ರ ಹಣಕಾಸು ವರ್ಷದ ಏಪ್ರಿಲ್–ಜೂನ್ ತ್ರೈಮಾಸಿಕದಲ್ಲಿ ₹551 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದಲ್ಲಿ ₹223 ಕೋಟಿ ಲಾಭ ದಾಖಲಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 147ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್, ಷೇರುಪೇಟೆಗೆ ಸೋಮವಾರ ತಿಳಿಸಿದೆ.
ನಿರ್ವಹಣಾ ಲಾಭವು ಶೇ 9ರಷ್ಟು ಏರಿಕೆಯಾಗಿದ್ದು, ₹1,321 ಕೋಟಿ ಗಳಿಸಿದೆ. ಬ್ಯಾಂಕ್‌ನ ವಹಿವಾಟು ₹4.61 ಲಕ್ಷ ಕೋಟಿಯಷ್ಟಾಗಿದ್ದು, ಶೇ 11ರಷ್ಟು ಬೆಳವಣಿಗೆ ಕಂಡಿದೆ. ಒಟ್ಟು ಮುಂಗಡವು ₹1.93 ಲಕ್ಷ ಕೋಟಿಯಾಗಿದೆ.
ಒಟ್ಟು ಠೇವಣಿಯು ₹2.68 ಲಕ್ಷ ಕೋಟಿಯಾಗಿದ್ದು, ಶೇ 7ರಷ್ಟು ಏರಿಕೆಯಾಗಿದೆ. ವಸೂಲಾಗದ ಸಾಲದ ಪ್ರಮಾಣ (ಎನ್‌ಪಿಎ) ಶೇ 3.32ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.78ರಷ್ಟಾಗಿದೆ.
ಜೂನ್ ಅಂತ್ಯಕ್ಕೆ ಬ್ಯಾಂಕ್‌ನ ಸಮರ್ಪಕ ಬಂಡವಾಳ ಅನುಪಾತ (ಸಿಎಆರ್) ಶೇ 17.09ರಷ್ಟಿದೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.