
ಪ್ರಜಾವಾಣಿ ವಾರ್ತೆಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (ಎಸ್‌ಎಫ್‌ಬಿ), ಕಿರು ಮತ್ತು ಸಣ್ಣ ಕೈಗಾರಿಕೆಗಳಿಗೆ (ಎಂಎಸ್ಇ) ಓವರ್‌ಡ್ರಾಫ್ಟ್ ಸೌಲಭ್ಯ ಕಲ್ಪಿಸಿದೆ.
‘ಈಗಾಗಲೇ ಒದಗಿಸುತ್ತಿರುವ ಅವಧಿ ಸಾಲಕ್ಕೆ ಹೆಚ್ಚುವರಿಯಾಗಿ ಈ ಸೌಲಭ್ಯ ಕಲ್ಪಿಸಲಾಗುವುದು. ₹ 50 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸುವ ಉದ್ದಿಮೆಗಳಿಗೆ ಈ ಸೌಲಭ್ಯ ದೊರೆಯಲಿದೆ. ಇದರಿಂದ ‘ಎಂಎಸ್‌ಇ’ಗಳಿಗೆ ಸಂಪೂರ್ಣ ಬ್ಯಾಂಕಿಂಗ್ ಸೇವೆ ಒದಗಿಸಿದಂತಾಗಲಿದೆ ಎಂದು ಉಜ್ಜೀಜವ್ ಎಸ್‌ಎಫ್‌ಬಿನ ಸಿಇಒ ಸಮಿತ್ ಘೋಷ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.