ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಆಗಸ್ಟ್ 9ರಿಂದ ಅನ್ವಯ ಆಗುವಂತೆ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇಕಡ 0.30ರಿಂದ ಶೇ 1.5ರವರೆಗೆ ಹೆಚ್ಚಿಸಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 75 ವಾರಗಳ ಮತ್ತು 75 ತಿಂಗಳುಗಳ ಅವಧಿಯ ಯೋಜನೆ ಪರಿಚಯಿಸಿದೆ. ಎರಡಕ್ಕೂ ಶೇ 7.5ರಷ್ಟು ಬಡ್ಡಿ ಸಿಗಲಿದೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.
990 ದಿನಗಳ ಅವಧಿಯ ಠೇವಣಿಗೂ ಶೇ 7.5ರ ಗರಿಷ್ಠ ಬಡ್ಡಿ ಸಿಗಲಿದೆ. ಹಿರಿಯ ನಾಗರಿಕರು ಶೇ 0.75ರಷ್ಟು ಹೆಚ್ಚುವರಿ ಬಡ್ಡಿದರ ಪಡೆಯಲಿದ್ದಾರೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.