ADVERTISEMENT

ನಿರುದ್ಯೋಗ ಪ್ರಮಾಣ ಅಲ್ಪ ಇಳಿಕೆ: ಎನ್‌ಎಸ್‌ಎಸ್‌ಒ

ಪಿಟಿಐ
Published 18 ಫೆಬ್ರುವರಿ 2025, 13:58 IST
Last Updated 18 ಫೆಬ್ರುವರಿ 2025, 13:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದ ನಗರ ಪ್ರದೇಶದ ವ್ಯಾಪ್ತಿಯಲ್ಲಿ 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣವು ಶೇ 6.4ಕ್ಕೆ ಇಳಿಕೆಯಾಗಿದೆ ಎಂದು ರಾಷ್ಟ್ರೀಯ ಮಾದರಿ ಸಮೀಕ್ಷೆ  ಕಚೇರಿ (ಎನ್‌ಎಸ್‌ಎಸ್‌ಒ) ಮಂಗಳವಾರ ತಿಳಿಸಿದೆ.

ನಗರ ಪ್ರದೇಶದಲ್ಲಿ 15 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ವಯೋಮಾನದವರ ನಿರುದ್ಯೋಗ ಪ್ರಮಾಣವು ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಶೇ 6.5ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಅಲ್ಪ ಪ್ರಮಾಣದಲ್ಲಿ ಇಳಿದಿದೆ ಎಂದು ತಿಳಿಸಿದೆ.

ನಗರ ಪ್ರದೇಶದಲ್ಲಿ ಮಹಿಳೆಯರ ನಿರುದ್ಯೋಗ ಪ್ರಮಾಣವು ಶೇ 8.1ಕ್ಕೆ ಇಳಿದಿದೆ. ಪುರುಷರ ನಿರುದ್ಯೋಗ ಪ್ರಮಾಣವು ಯಥಾಸ್ಥಿತಿಯಲ್ಲಿದ್ದು, ಶೇ 5.8ರಷ್ಟಿದೆ ಎಂದು ತಿಳಿಸಿದೆ.

ADVERTISEMENT

ದೇಶದ ದುಡಿಯುವ ವರ್ಗದಲ್ಲಿರುವ ನಿರುದ್ಯೋಗಿಗಳ ಶೇಕಡಾವಾರು ಲೆಕ್ಕಾಚಾರ ಆಧರಿಸಿ ಈ ಸಮೀಕ್ಷೆ ನಡೆಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.