ನಿರುದ್ಯೋಗ (ಸಾಂಕೇತಿಕ ಚಿತ್ರ)
ನವದೆಹಲಿ: 15 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನವರ ನಿರುದ್ಯೋಗ ಪ್ರಮಾಣವು ನವೆಂಬರ್‌ನಲ್ಲಿ ಶೇಕಡ 4.7ಕ್ಕೆ ಇಳಿದಿದೆ. ಇದು ಅಕ್ಟೋಬರ್‌ನಲ್ಲಿ ಶೇ 5.2ರಷ್ಟು ಇತ್ತು.
ನವೆಂಬರ್‌ನ ನಿರುದ್ಯೋಗ ಪ್ರಮಾಣವು ಈ ವರ್ಷದ ಏಪ್ರಿಲ್ ನಂತರದ ಕನಿಷ್ಠ ಮಟ್ಟ ಎಂದು ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯ ಹೇಳಿದೆ.
ನವೆಂಬರ್‌ನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ಪ್ರಮಾಣವು ಶೇ 3.9ಕ್ಕೆ ಇಳಿಕೆಯಾಗಿದೆ, ನಗರ ಪ್ರದೇಶಗಳಲ್ಲಿ ಇದು ಶೇ 6.5ಕ್ಕೆ ಇಳಿಕೆ ಕಂಡಿದೆ ಎಂದು ಸಚಿವಾಲಯ ಹೇಳಿದೆ.
ಕಾರ್ಮಿಕ ಮಾರುಕಟ್ಟೆಯು ಹೆಚ್ಚು ಬಲಗೊಳ್ಳುತ್ತಿರುವುದನ್ನು, ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿ ಉತ್ತಮವಾಗಿರುವುದನ್ನು, ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿರುವುದನ್ನು, ಗ್ರಾಮೀಣ ಪ್ರದೇಶಗಳಲ್ಲಿ ಪರಿಸ್ಥಿತಿಯು ನಿಧಾನವಾಗಿ ಸುಧಾರಿಸುತ್ತಿರುವುದನ್ನು ಅಂಕಿ–ಅಂಶಗಳು ತೋರಿಸುತ್ತಿವೆ ಎಂದು ಸಚಿವಾಲಯದ ಹೇಳಿಕೆಯು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.