ADVERTISEMENT

ಯುಬಿಐ ಸಾಲ ನೀಡಿಕೆಯಲ್ಲಿ ಶೇ 8.6ರಷ್ಟು ಹೆಚ್ಚಳ

ಪಿಟಿಐ
Published 5 ಏಪ್ರಿಲ್ 2025, 14:18 IST
Last Updated 5 ಏಪ್ರಿಲ್ 2025, 14:18 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹9.82 ಲಕ್ಷ ಕೋಟಿ ಸಾಲ ನೀಡಲಾಗಿದೆ. ಒಟ್ಟಾರೆ ಸಾಲ ನೀಡಿಕೆಯಲ್ಲಿ ಶೇ 8.6ರಷ್ಟು ಹೆಚ್ಚಳವಾಗಿದೆ ಎಂದು ಯೂನಿಯನ್ ಬ್ಯಾಂಕ್‌ ಆಫ್‌ ಇಂಡಿಯಾ (ಯುಬಿಐ) ತಿಳಿಸಿದೆ.

₹13.09 ಲಕ್ಷ ಕೋಟಿ ಠೇವಣಿ ಸಂಗ್ರಹಿಸಿದೆ. 2023–24ರಲ್ಲಿ ₹12.21 ಲಕ್ಷ ಕೋಟಿ ಸಂಗ್ರಹಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 7.22ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್‌, ಷೇರುಪೇಟೆಗೆ ಮಾಹಿತಿ ನೀಡಿದೆ. 

2024–25ನೇ ಆರ್ಥಿಕ ವರ್ಷದ ಅಂತ್ಯಕ್ಕೆ ಬ್ಯಾಂಕ್‌ನ ಒಟ್ಟು ವ್ಯವಹಾರ ₹22.92 ಲಕ್ಷ ಕೋಟಿ ಆಗಿದೆ. 2023–24ರಲ್ಲಿ ₹21.26 ಲಕ್ಷ ಕೋಟಿ ಆಗಿತ್ತು. ಇದಕ್ಕೆ ಹೋಲಿಸಿದರೆ ಶೇ 7.8ರಷ್ಟು ಹೆಚ್ಚಳವಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.