ADVERTISEMENT

ಯುಬಿಐ ಬಡ್ಡಿ ದರ ಇಳಿಕೆ

ಪಿಟಿಐ
Published 11 ಜೂನ್ 2025, 16:05 IST
Last Updated 11 ಜೂನ್ 2025, 16:05 IST
ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ
ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ   

ನವದೆಹಲಿ: ಸರ್ಕಾರಿ ಸ್ವಾಮ್ಯದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ (ಯುಬಿಐ) ಸಾಲದ ಮೇಲಿನ ಬಡ್ಡಿ ದರವನ್ನು ಶೇ 0.50ರಷ್ಟು ಕಡಿತಗೊಳಿಸಿದೆ. 

ಎಕ್ಸ್‌ಟರ್ನಲ್‌ ಬೆಂಚ್‌ಮಾರ್ಕ್‌ ಲೆಂಡಿಂಗ್ ರೇಟ್‌ (ಇಬಿಎಲ್‌ಆರ್‌) ಮತ್ತು ರೆಪೊ ದರ ಆಧರಿಸಿದ ಸಾಲದ ಬಡ್ಡಿ ದರವನ್ನು ಕಡಿಮೆ ಮಾಡಲಾಗಿದೆ. ಗೃಹ, ವಾಹನ, ವೈಯಕ್ತಿಕ ಮತ್ತು ಎಂಎಸ್‌ಎಂಇ ಸಾಲಗಾರರಿಗೆ ಈ ಬಡ್ಡಿ ದರ ಇಳಿಕೆಯ ಪ್ರಯೋಜನ ದೊರೆಯಲಿದೆ ಎಂದು ಬ್ಯಾಂಕ್‌ ತಿಳಿಸಿದೆ. 

ಕಳೆದ ವಾರ ನಡೆದ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆಯು ರೆಪೊ ದರವನ್ನು ಶೇ 0.50ರಷ್ಟು ಕಡಿತಗೊಳಿಸಿತ್ತು. ಹೀಗಾಗಿ ಬ್ಯಾಂಕ್‌ ಬಡ್ಡಿ ದರ ಇಳಿಕೆ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.