ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡುವವರಿಗೆ ಜಾರಿಗೆ ತರಲಾಗಿರುವ ಹೊಸ ತೆರಿಗೆ ಯೋಜನೆ ಅಡಿಯಲ್ಲಿ ಕಡಿತ ಮಾಡುವ ತೆರಿಗೆ ಪ್ರಮಾಣ ತಗ್ಗಿಸಲು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ. ಈ ಕುರಿತು ಬಜೆಟ್‌ನಲ್ಲಿ ಘೋಷಣೆ ಇರುವ ಸಾಧ್ಯತೆ ಇದೆ.
ತೆರಿಗೆ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಅಂತಿಮ ತೀರ್ಮಾನವನ್ನು ಪ್ರಧಾನಿಯವರ ಕಚೇರಿ ತೆಗೆದುಕೊಳ್ಳಲಿದೆ ಎಂದು ಮೂಲಗಳು ಹೇಳಿವೆ. ಕೇಂದ್ರ ಹಣಕಾಸು ಸಚಿವಾಲಯವು ಈ ಕುರಿತು ಪ್ರತಿಕ್ರಿಯೆ ನೀಡಿಲ್ಲ. ಹೊಸ ತೆರಿಗೆ ಯೋಜನೆಯನ್ನು 2020ರಲ್ಲಿ ಘೋಷಿಸಲಾಗಿದೆ. ಇದನ್ನು ಆಯ್ಕೆ ಮಾಡಿಕೊಳ್ಳುವುದು ಆದಾಯ ತೆರಿಗೆ ಪಾವತಿದಾರರ ಪಾಲಿಗೆ ಐಚ್ಛಿಕ. ಆದರೆ, ಮನೆ ಬಾಡಿಗೆ, ವಿಮೆ ಸೇರಿ ಹಲವು ತೆರಿಗೆ ವಿನಾಯಿತಿಗಳು ಇದಕ್ಕೆ ಅನ್ವಯವಾಗದ ಕಾರಣ ಆದಾಯ ತೆರಿಗೆ ಪಾವತಿದಾರರ ನಡುವೆ ಜನಪ್ರಿಯ ಆಗಿಲ್ಲ ಎಂದಿದ್ದಾರೆ ತಜ್ಞರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.