ADVERTISEMENT

ಸುಂಕ ನೀತಿ: ಕಚ್ಚಾ ತೈಲ ಬೆಲೆ ಇಳಿಕೆ

ರಾಯಿಟರ್ಸ್
Published 4 ಮಾರ್ಚ್ 2025, 14:10 IST
Last Updated 4 ಮಾರ್ಚ್ 2025, 14:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಂಡನ್‌: ಪೆಟ್ರೋಲಿಯಂ ಉತ್ಪನ್ನಗಳನ್ನು ರಫ್ತು ಮಾಡುವ ದೇಶಗಳ ಸಂಘಟನೆಯು (ಒಪೆಕ್‌) ಉತ್ಪಾದನೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲದ ಬೆಲೆಯು ಶೇ 1.5ರಷ್ಟು ಇಳಿಕೆಯಾಗಿದೆ. ಪ್ರತೀ ಬ್ಯಾರೆಲ್‌ ದರ 70.57 ಡಾಲರ್‌ ಆಗಿದೆ.

ವೆಸ್ಟ್‌ ಟೆಕ್ಸಾಸ್‌ ಇಂಟರ್‌ಮಿಡಿಯೇಟ್‌ ಕಚ್ಚಾ ತೈಲದ ಬೆಲೆಯು ಶೇ 1.3ರಷ್ಟು ಇಳಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ ಬೆಲೆಯು 67.51 ಡಾಲರ್‌ಗೆ ತಲುಪಿದೆ.

ಕೆನಡಾ, ಮೆಕ್ಸಿಕೊದ ಮೇಲೆ ಅಮೆರಿಕದ ಸುಂಕ ನೀತಿಯು ಮಂಗಳವಾರದಿಂದ ಜಾರಿಗೆ ಬಂದಿದೆ. ಮತ್ತೊಂದೆಡೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಉಕ್ರೇನ್‌ಗೆ ಸೇನಾ ನೆರವು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ.

ADVERTISEMENT

ಮತ್ತೊಂದೆಡೆ ಚೀನಾವು ಅಮೆರಿಕದ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇ 15ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದೆ. ಈ ಸುಂಕ ಸಮರದಿಂದ ಕಚ್ಚಾ ತೈಲದ ಬೆಲೆಯು ಇಳಿಕೆಯ ಹಾದಿ ಹಿಡಿದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.