ADVERTISEMENT

ಏಕೀಕೃತ ಪಿಂಚಣಿ ಜಾರಿ: ಕೇಂದ್ರ

ಪಿಟಿಐ
Published 3 ಏಪ್ರಿಲ್ 2025, 15:48 IST
Last Updated 3 ಏಪ್ರಿಲ್ 2025, 15:48 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಲ್ಲಿ ಏಪ್ರಿಲ್‌ 1ರಿಂದ ಏಕೀಕೃತ ಪಿಂಚಣಿ ಯೋಜನೆಯು (ಯುಪಿಎಸ್‌) ಜಾರಿಗೊಂಡಿದೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ಎಂ. ನಾಗರಾಜು ಗುರುವಾರ ಹೇಳಿದ್ದಾರೆ.

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್‌ಆರ್‌ಡಿಎ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಿಂಚಣಿ ಯೋಜನೆಯಡಿ (ಎನ್‌ಪಿಎಸ್‌) ಇರುವ ಕೇಂದ್ರ ಸರ್ಕಾರಿ ನೌಕರರಿಗೆ ನಿವೃತ್ತಿಯ ಹಿಂದಿನ 12 ತಿಂಗಳ ಸರಾಸರಿ ಮೂಲ ವೇತನದ ಕನಿಷ್ಠ ಶೇ 50ರಷ್ಟು ಪಿಂಚಣಿ ಸಿಗಲಿದೆ ಎಂದರು.

ದೇಶದಲ್ಲಿ ಎನ್‌ಪಿಎಸ್ ಚಂದಾದಾರರ ಸಂಖ್ಯೆ ಹೆಚ್ಚುತ್ತಿದೆ. ಇದು ಈ ಯೋಜನೆಯ ಮೇಲಿನ ಜನರ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.