ADVERTISEMENT

ಆರ್ಥಿಕ ಹಿಂಜರಿತದ ಭೀತಿಯಲ್ಲಿ ಅಮೆರಿಕ

ಏಜೆನ್ಸೀಸ್
Published 28 ಜುಲೈ 2022, 15:49 IST
Last Updated 28 ಜುಲೈ 2022, 15:49 IST
   

ವಾಷಿಂಗ್ಟನ್: ಅಮೆರಿಕದ ಅರ್ಥ ವ್ಯವಸ್ಥೆಯು ಜೂನ್‌ ತ್ರೈಮಾಸಿಕದಲ್ಲಿ ಶೇಕಡ (–) 0.9ರಷ್ಟು ಕುಸಿದಿದೆ. ಇದರಿಂದಾಗಿ ಸತತ ಎರಡು ತ್ರೈಮಾಸಿಕಗಳಲ್ಲಿ ಅರ್ಥ ವ್ಯವಸ್ಥೆ ಕುಸಿತ ಕಂಡಂತೆ ಆಗಿದೆ. ಅಮೆರಿಕವು ಆರ್ಥಿಕ ಹಿಂಜರಿತದತ್ತ ಸಾಗುತ್ತಿದೆ ಎಂಬ ಭೀತಿ ವ್ಯಕ್ತವಾಗಿದೆ.

ಮಾರ್ಚ್‌ ತ್ರೈಮಾಸಿಕದಲ್ಲಿ ಅಮೆರಿಕದ ಜಿಡಿಪಿ (ಒಟ್ಟು ಆಂತರಿಕ ಉತ್ಪಾದನೆ) ಶೇ (–)1.6ರಷ್ಟು ಕುಸಿತ ಕಂಡಿತ್ತು. ಜಿಡಿಪಿಯು ಸತತವಾಗಿ ಕುಸಿಯುತ್ತಿರುವುದು ಆರ್ಥಿಕ ಹಿಂಜರಿತ ಎದುರಾಗುತ್ತಿರುವುದರ ಅನಧಿಕೃತ ಸೂಚನೆ.

ಅಮೆರಿಕದ ಫೆಡರಲ್ ರಿಸರ್ವ್‌ ಬುಧವಾರ ಬಡ್ಡಿ ದರವನ್ನು 75 ಮೂಲಾಂಶದಷ್ಟು ಹೆಚ್ಚಿಸಿದೆ. ಆರ್ಥಿಕ ಬೆಳವಣಿಗೆ ದರ ಕುರಿತು ಪ್ರತಿಕ್ರಿಯೆ ನೀಡಿರುವ ಅಮೆರಿಕದ ಅಧ್ಯಕ್ಷ ಜೋ ಬೈಡೆನ್, ‘ಅರ್ಥ ವ್ಯವಸ್ಥೆಯು ಸರಿಯಾದ ದಿಕ್ಕಿನಲ್ಲಿ ಸಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಅರ್ಥ ವ್ಯವಸ್ಥೆಯು ನಿಧಾನಗತಿಗೆ ತಿರುಗಿರುವುದರಲ್ಲಿ ಆಶ್ಚರ್ಯವಾಗುವಂಥದ್ದು ಏನೂ ಇಲ್ಲ. ಏಕೆಂದರೆ, ಹಣದುಬ್ಬರವನ್ನು ಕಡಿಮೆ ಮಾಡಲು ಫೆಡರಲ್ ರಿಸರ್ವ್ ಪ್ರಯತ್ನಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.