ಸಾಂರ್ಭಿಕ ಚಿತ್ರ
ನವದೆಹಲಿ: ಜಿಎಸ್‌ಟಿ ಪರಿಷ್ಕರಣೆಯ ಪರಿಣಾಮವಾಗಿ ನವರಾತ್ರಿ ಸಂದರ್ಭದಲ್ಲಿ ಕಾರುಗಳ ಮಾರಾಟ ಜೋರಾಗಿ ನಡೆದಿದ್ದು, ಮಾರುತಿ ಸುಜುಕಿ, ಟಾಟಾ ಮೋಟರ್ಸ್ ಮತ್ತು ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ವಾಹನಗಳ ಮಾರಾಟ ಪ್ರಮಾಣ ಸೆಪ್ಟೆಂಬರ್‌ನಲ್ಲಿ ಏರಿಕೆ ಕಂಡಿದೆ.
ಸೆಪ್ಟೆಂಬರ್‌ನಲ್ಲಿ ಕಂಪನಿಯು ಒಟ್ಟು 1.73 ಲಕ್ಷ ವಾಹನಗಳನ್ನು ಮಾರಾಟ ಮಾಡಿದೆ. ಇದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಮಾರಾಟ ಆಗಿದ್ದ ವಾಹನಗಳ ಸಂಖ್ಯೆಗೆ ಹೋಲಿಸಿದರೆ ಶೇ 27.5ರಷ್ಟು ಹೆಚ್ಚು ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿಯ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೊ ಬ್ಯಾನರ್ಜಿ ಹೇಳಿದ್ದಾರೆ.
ಜಿಎಸ್‌ಟಿ ಇಳಿಕೆಯು ಕಾರು ಮಾರಾಟ ಹೆಚ್ಚಾಗಲು ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ಟಾಟಾ ಮೋಟರ್ಸ್ ಕಂಪನಿಯು ಸೆಪ್ಟೆಂಬರ್‌ನಲ್ಲಿ 60,907 ಪ್ರಯಾಣಿಕ ವಾಹನಗಳನ್ನು ಮಾರಾಟ ಮಾಡಿದೆ. ಇದು ಹಿಂದಿನ ವರ್ಷದ ಇದೇ ಅವಧಿಯ ಮಾರಾಟ ಸಂಖ್ಯೆಗೆ ಹೋಲಿಸಿದರೆ ಶೇ 47ರಷ್ಟು ಹೆಚ್ಚು.
ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯ ವಾಹನ ಮಾರಾಟವು ಸೆಪ್ಟೆಂಬರ್‌ನಲ್ಲಿ ಶೇ 10ರಷ್ಟು ಹೆಚ್ಚಾಗಿದೆ. ಹುಂಡೈ ಮೋಟರ್ ಇಂಡಿಯಾ ಕಂಪನಿಯ ವಾಹನ ಮಾರಾಟವು ಅಲ್ಪ ಪ್ರಮಾಣದಲ್ಲಿ ಏರಿಕೆ ಆಗಿದ್ದು, 51,547ಕ್ಕೆ ತಲುಪಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ 51,101 ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.