ADVERTISEMENT

ಬ್ಯಾಂಕ್‌ ವಿಲೀನ ವಿರೋಧಿಸಿ ಇಂದು ಮಂಗಳೂರು ಬಂದ್‌

ವಿಜಯ ಬ್ಯಾಂಕ್‌ ಹೆಸರು ಮುಂದುವರಿಸಲು ಸಂಸದರ ಮನವಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2019, 19:29 IST
Last Updated 8 ಜನವರಿ 2019, 19:29 IST

ಮಂಗಳೂರು: ವಿಜಯ ಬ್ಯಾಂಕ್‌ ವಿಲೀನ ಪ್ರಕ್ರಿಯೆ ವಿರೋಧಿಸಿ ಯುವ ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಬುಧವಾರ ಮಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.

‘ಲಾಭದಲ್ಲಿರುವ ಬ್ಯಾಂಕ್‌ ಅನ್ನು ನಷ್ಟದಲ್ಲಿರುವ ಬ್ಯಾಂಕಿನೊಂದಿಗೆ ವಿಲೀನ ಮಾಡುವುದಕ್ಕೆ ನಮ್ಮ ವಿರೋಧವಿದೆ. ಇದನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ’ ಎಂದು ಘಟಕದ ಅಧ್ಯಕ್ಷ ಮಿಥುನ್‌ ರೈ ತಿಳಿಸಿದ್ದಾರೆ.

ಬ್ಯಾಂಕ್‌ ವಿಲೀನ ವಿರೋಧಿಸಿ ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ADVERTISEMENT

ಇನ್ನೊಂದೆಡೆ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌ಕುಮಾರ್‌ ಮಾತನಾಡಿ, ವಿಲೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ವಿಜಯ ಬ್ಯಾಂಕ್‌ ಹೆಸರನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಸದರ ಮನವಿ: ಸಂಸದ ನಳಿನ್‌ಕುಮಾರ್‌ ಕಟೀಲ್‌, ಶೋಭಾ ಕರಂದ್ಲಾಜೆ ಅವರನ್ನು ಒಳಗೊಂಡ ಸಂಸದರ ನಿಯೋಗ ಮಂಗಳವಾರ ಕೇಂದ್ರ ಸಚಿವ ಅರುಣ್‌ ಜೇಟ್ಲಿ ಅವರನ್ನು ಭೇಟಿ ಮಾಡಿ, ವಿಲೀನದ ನಂತರ ವಿಜಯ ಬ್ಯಾಂಕ್‌ ಹೆಸರನ್ನೇ ಮುಂದುವರಿಸಬೇಕು ಎಂದು ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.