ನವದೆಹಲಿ: ದೇಶದ ದೂರಸಂಪರ್ಕ ಸೇವಾ ಕಂಪನಿ ವೊಡೊಫೋನ್ ಐಡಿಯಾದಲ್ಲಿ ಶುಕ್ರವಾರ ಮುಂಜಾನೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ಈಗ ಎಲ್ಲ ಸೇವೆಗಳು ಸಹಜ ಸ್ಥಿತಿಗೆ ಮರಳಿವೆ ಎಂದು ಕಂಪನಿ ತಿಳಿಸಿದೆ.
ಶುಕ್ರವಾರ ಮುಂಜಾನೆ ದೆಹಲಿಯ ನಮ್ಮ ನೆಟ್‌ವರ್ಕ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಹೆಚ್ಚಿನ ಬಳಕೆದಾರರು ಸಿಗ್ನಲ್ ತೊಂದರೆ ಕುರಿತು ದೂರು ನೀಡಿದರು. ಕೂಡಲೇ ಕಾರ್ಯಪ್ರವೃತ್ತರಾಗಿ ಸಮಸ್ಯೆ ಬಗೆಹರಿಸಿದ್ದೇವೆ. ಗ್ರಾಹಕರಿಗೆ ಉಂಟಾದ ಅಡೆಚಣೆಗೆ ಕ್ಷಮೆ ಕೋರುವುದಾಗಿ ಕಂಪನಿ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.