ADVERTISEMENT

ಗೂಗಲ್‌ಗೆ ದಂಡ: ಭಾರತದ ಗ್ರಾಹಕರು, ಉದ್ದಿಮೆಗಳಿಗೆ ಹಿನ್ನಡೆ ಎಂದ ಸಂಸ್ಥೆ

ಪಿಟಿಐ
Published 21 ಅಕ್ಟೋಬರ್ 2022, 14:17 IST
Last Updated 21 ಅಕ್ಟೋಬರ್ 2022, 14:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಭಾರತೀಯ ಸ್ಪರ್ಧಾ ಆಯೋಗವು (ಸಿಸಿಐ) ತನಗೆ ₹ 1,337 ಕೋಟಿ ದಂಡ ವಿಧಿಸಿರುವುದು ಭಾರತದ ಗ್ರಾಹಕರು ಮತ್ತು ಉದ್ದಿಮೆಗಳಿಗೆ ದೊಡ್ಡ ಹಿನ್ನಡೆ ಎಂದು ಗೂಗಲ್‌ ಕಂಪನಿ ಹೇಳಿದೆ.

ಆ್ಯಂಡ್ರಾಯ್ಡ್‌ ಕಾರ್ಯಾಚರಣೆ ವ್ಯವಸ್ಥೆಯ ಬಳಕೆ ಇರುವಲ್ಲಿ ತಾನು ಹೊಂದಿರುವ ಪ್ರಬಲ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡ ಕಾರಣಕ್ಕೆ ಗೂಗಲ್ ಕಂಪನಿಗೆ ಸಿಸಿಐ ದಂಡ ವಿಧಿಸಿದೆ.

ಈ ಕುರಿತು ಪ್ರಕ್ರಿಯೆ ನೀಡಿರುವ ಕಂಪನಿಯ ವಕ್ತಾರರು, ಸಿಸಿಐ ನಿರ್ಧಾರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಆ್ಯಂಡ್ರಾಯ್ಡ್‌ನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆ ವಿಶ್ವಾಸ ಹೊಂದಿರುವ ಭಾರತೀಯರಿಗೆ ಗಂಭೀರವಾದ ಸುರಕ್ಷತಾ ಅಪಾಯಗಳು ಎದುರಾಗಲಿವೆ. ಭಾರತೀಯರಿಗೆ ಮೊಬೈಲ್‌ ಸಾಧನಗಳ ಮೇಲಿನ ವೆಚ್ಚವು ಹೆಚ್ಚಾಗಲಿದೆ ಎಂದು ಅವರು ಇ–ಮೇಲ್‌ ಮೂಲಕ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.