ADVERTISEMENT

ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಿಪ್ರೊದಿಂದ ಹೆಚ್ಚುವರಿ ನೆರವು

ಪಿಟಿಐ
Published 6 ಜುಲೈ 2021, 19:31 IST
Last Updated 6 ಜುಲೈ 2021, 19:31 IST
ವಿಪ್ರೊ
ವಿಪ್ರೊ   

ಮುಂಬೈ: ಐ.ಟಿ. ಸೇವಾ ಕಂಪನಿ ವಿಪ್ರೊ, ಕೋವಿಡ್ ವಿರುದ್ಧದ ಹೋರಾಟಕ್ಕೆ ಹೆಚ್ಚುವರಿಯಾಗಿ ₹ 1,000 ಕೋಟಿ ಮೀಸಲಿಡುವುದಾಗಿ ಘೋಷಿಸಿದೆ. ಈ ಮೊದಲು ಕಂಪನಿಯು ₹ 1,250 ಕೋಟಿ ನೆರವು ಪ್ರಕಟಿಸಿತ್ತು.

ಹೆಚ್ಚುವರಿ ಮೊತ್ತವನ್ನು ಸಾರ್ವಜನಿಕರಿಗೆ ಲಸಿಕೆ ಕೊಡಿಸಲು ಬಳಸಿಕೊಳ್ಳಲಾಗುತ್ತದೆ ಎಂದು ವಿಪ್ರೊ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರು ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಶಾಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರೇಮ್‌ಜಿ, ‘ಕಳೆದ ಒಂದೂವರೆ ವರ್ಷಗಳಲ್ಲಿ ಮಕ್ಕಳು ಏನನ್ನು ಕಲಿಯಬಹುದಿತ್ತೋ ಅದನ್ನು ಕಲಿಯಲು ಸಹಾಯ ಮಾಡದೆಯೇ ಅವರನ್ನು ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವುದು ತಪ್ಪು’ ಎಂದು ಹೇಳಿದ್ದಾರೆ.

ADVERTISEMENT

ಮಕ್ಕಳ ಮನೆಗಳ ಸಮೀಪದಲ್ಲಿ, ತೆರೆದ ಪ್ರದೇಶಗಳಲ್ಲಿ ತರಗತಿಗಳನ್ನು ಆಯೋಜಿಸಬಹುದು. ಶಿಕ್ಷಕರಿಗೆ ಲಸಿಕೆ ಕೊಡಿಸಬಹುದು. ಒಂದೂವರೆ ವರ್ಷದಲ್ಲಿ ಕಳೆದುಕೊಂಡಿರುವ ಶಾಲಾ ಅವಧಿಯನ್ನು ಸರಿದೂಗಿಸುವಂತೆ ಶೈಕ್ಷಣಿಕ ಕಾರ್ಯಕ್ರಮವನ್ನು ಮರುರೂಪಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.