ನವದೆಹಲಿ: 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ವಿಪ್ರೊ ಕಂಪನಿಯು ₹3,354 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಗಳಿಸಿದ್ದ ಲಾಭಕ್ಕೆ ಹೋಲಿಸಿದರೆ ಶೇ 24ರಷ್ಟು ಏರಿಕೆಯಾಗಿದೆ ಎಂದು ಕಂಪನಿಯು ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.
ವರಮಾನದಲ್ಲಿ ಶೇ 0.5ರಷ್ಟು ಹೆಚ್ಚಳವಾಗಿದ್ದು, ₹22,319 ಕೋಟಿ ಗಳಿಸಿದೆ. ಪ್ರತಿ ಈಕ್ವಿಟಿ ಷೇರಿಗೆ ₹6 ಮಧ್ಯಂತರ ಲಾಭಾಂಶ ಘೋಷಿಸಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.