ನವದೆಹಲಿ: 2024–25ನೇ ಮಾರ್ಚ್ ತ್ರೈಮಾಸಿಕದಲ್ಲಿ ದೇಶದ ನಾಲ್ಕನೇ ಅತಿದೊಡ್ಡ ಐ.ಟಿ ಸೇವಾ ಕಂಪನಿ ವಿಪ್ರೊ ₹3,569 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹2,834 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 26ರಷ್ಟು ಏರಿಕೆಯಾಗಿದೆ.
ಈ ತ್ರೈಮಾಸಿಕದಲ್ಲಿ ₹22,504 ಕೋಟಿ ವರಮಾನ ಗಳಿಸಿದೆ. ಪೂರ್ಣ ಆರ್ಥಿಕ ವರ್ಷದಲ್ಲಿ ₹89,088 ಕೋಟಿ ವರಮಾನ ಗಳಿಸಲಾಗಿದೆ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.
‘2025–26ನೇ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಐ.ಟಿ ಸೇವಾ ವಹಿವಾಟಿನ ವರಮಾನದಲ್ಲಿ ಶೇ 3.5ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಅನಿಶ್ಚಿತ ಸ್ಥಿತಿಯೇ ಇದಕ್ಕೆ ಕಾರಣ’ ಎಂದು ಕಂಪನಿಯು ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀನಿ ಪಲ್ಲಿಯಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.