ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ನಷ್ಟ ಅನುಭವಿಸುವಂತಾಗಿದೆ ಎಂದು ವಂಡರ್‌ಲಾ ಹಾಲಿಡೇಸ್ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 14.51 ಕೋಟಿ ನಷ್ಟ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ತೆರಿಗೆ ಪಾವತಿಸಿದ ನಂತರದ ಲಾಭ ₹ 42.03 ಕೋಟಿ ಇತ್ತು.
ಕಾರ್ಯಾಚರಣೆ ವೆಚ್ಚ ತಗ್ಗಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಿಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ವೆಚ್ಚವು ₹ 49 ಕೋಟಿ ಆಗಿತ್ತು. ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 11.90 ಕೋಟಿಗಳಷ್ಟಾಗಿದೆ ಎಂದು ತಿಳಿಸಿದೆ.
‘ಪಾರ್ಕ್‌ಗಳನ್ನು ಆರಂಭಿಸಲು ಶೀಘ್ರವೇ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ. ಎಲ್ಲಾ ರೀತಿಯ ಸುರಕ್ಷತೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಿದ್ಧತೆ ನಡೆಸಿದ್ದೇವೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್ ಜೋಸೆಫ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.