ADVERTISEMENT

ಉಕ್ರೇನ್‌ ಬಿಕ್ಕಟ್ಟು: ಭಾರತದ ಬೆಳವಣಿಗೆ ಅಂದಾಜು ತಗ್ಗಿಸಿದ ವಿಶ್ವಬ್ಯಾಂಕ್

ರಾಯಿಟರ್ಸ್
Published 14 ಏಪ್ರಿಲ್ 2022, 16:13 IST
Last Updated 14 ಏಪ್ರಿಲ್ 2022, 16:13 IST
   

ನವದೆಹಲಿ: ಭಾರತ ಮತ್ತು ಇಡೀ ದಕ್ಷಿಣ ಏಷ್ಯಾ ಪ್ರದೇಶದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ವಿಶ್ವ ಬ್ಯಾಂಕ್‌ ತಗ್ಗಿಸಿದೆ. ಪೂರೈಕೆ ವ್ಯವಸ್ಥೆಯಲ್ಲಿ ಸಮಸ್ಯೆಗಳು ಆಗುತ್ತಿರುವುದು ಹಾಗೂ ಉಕ್ರೇನ್‌ ಬಿಕ್ಕಟ್ಟಿನಿಂದಾಗಿ ಹಣದುಬ್ಬರ ಪ್ರಮಾಣ ಜಾಸ್ತಿ ಆಗುತ್ತಿರುವುದು ಇದಕ್ಕೆ ಕಾರಣ ಎಂದು ಅದು ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಅರ್ಥ ವ್ಯವಸ್ಥೆಯು ಶೇಕಡ 8ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದು ಅದು ಅಂದಾಜಿಸಿದೆ. ದೇಶದ ಜಿಡಿ‍ಪಿ ಶೇ 8.7ರಷ್ಟು ಬೆಳವಣಿಗೆ ಕಾಣಲಿದೆ ಎಂದು ಈ ಮೊದಲು ಅಂದಾಜು ಮಾಡಿತ್ತು. ಹಾಲಿ ಹಣಕಾಸು ವರ್ಷದಲ್ಲಿ ದಕ್ಷಿಣ ಏಷ್ಯಾದ ಬೆಳವಣಿಗೆಯ ಅಂದಾಜು ಪ್ರಮಾಣ ಶೇ 6.6ರಷ್ಟು ಎಂದು ಕೂಡ ಹೇಳಿದೆ.

‘ತೈಲ ಬೆಲೆ ಮತ್ತು ಆಹಾರ ವಸ್ತುಗಳ ಬೆಲೆಯು ದುಬಾರಿ ಆಗಿರುವುದು ಜನರ ಆದಾಯದ ಮೇಲೆ ನಕಾರಾತ್ಮಕ ಪರಿಣಾಮ ಉಂಟುಮಾಡಲಿದೆ’ ಎಂದು ವಿಶ್ವ ಬ್ಯಾಂಕ್‌ನ ದಕ್ಷಿಣ ಏಷ್ಯಾ ಉಪಾಧ್ಯಕ್ಷ ಹಾರ್ಟ್‌ವಿಗ್ ಷಾಫರ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.