ADVERTISEMENT

ಸೆಪ್ಟೆಂಬರ್‌ ತ್ರೈಮಾಸಿಕ: ಯೆಸ್‌ ಬ್ಯಾಂಕ್‌ ಲಾಭ ಶೇ 32ರಷ್ಟು ಇಳಿಕೆ

ಪಿಟಿಐ
Published 22 ಅಕ್ಟೋಬರ್ 2022, 9:58 IST
Last Updated 22 ಅಕ್ಟೋಬರ್ 2022, 9:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಯೆಸ್‌ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹152.82 ಕೋಟಿ ಆಗಿದೆ.

ಹಿಂದಿನ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹225.50 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 32ರಷ್ಟು ಇಳಿಕೆ ಆಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹377 ಕೋಟಿಯಿಂದ ₹582 ಕೋಟಿಗೆ ಏರಿಕೆ ಆಗಿದೆ. ಹೀಗಾಗಿ ಲಾಭದಲ್ಲಿ ಇಳಿಕೆ ಕಾಣುವಂತಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಒಟ್ಟು ವರಮಾನವು ₹5,430 ಕೋಟಿಯಿಂದ ₹6,394 ಕೋಟಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಬ್ಯಾಂಕ್‌ ಮಾಹಿತಿ ನೀಡಿದೆ.

ADVERTISEMENT

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣವು ಶೇ 14.97 ರಿಂದ ಶೇ 12.89ಕ್ಕೆ ಇಳಿಕೆ ಕಂಡಿದೆ. ನಿವ್ವಳ ಎನ್‌ಪಿಎ ಶೇ 5.55 ರಿಂದ ಶೇ 3.60ಕ್ಕೆ ಇಳಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.