ADVERTISEMENT

ಯೆಸ್‌ ಬ್ಯಾಂಕ್‌ ಲಾಭ ಶೇ 55ರಷ್ಟು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 15:57 IST
Last Updated 17 ಜನವರಿ 2026, 15:57 IST
ಯೆಸ್‌ ಬ್ಯಾಂಕ್‌
ಯೆಸ್‌ ಬ್ಯಾಂಕ್‌   

ಮುಂಬೈ: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಖಾಸಗಿ ವಲಯದ ಯೆಸ್‌ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇ 55ರಷ್ಟು ಹೆಚ್ಚಳವಾಗಿದೆ.

ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹612 ಕೋಟಿ ಲಾಭ ಗಳಿಸಿತ್ತು. ಈ ಬಾರಿ ₹952 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕ್ ಶನಿವಾರ ತಿಳಿಸಿದೆ.

ಬಡ್ಡಿ ಮೂಲಕ ಗಳಿಸಿದ ವರಮಾನವು ಶೇ 10.9ರಷ್ಟು ಹೆಚ್ಚಾಗಿದ್ದು, ₹2,466 ಕೋಟಿಯಾಗಿದೆ. ಬ್ಯಾಂಕ್‌ನ ಸಾಲ ನೀಡಿಕೆ ಪ್ರಮಾಣ ಶೇ 5.2ರಷ್ಟು ಹೆಚ್ಚಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಪ್ರಮಾಣವನ್ನು ಶೇ 8ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ADVERTISEMENT

ಬ್ಯಾಂಕಿಂಗ್‌ ವಲಯದಲ್ಲಿ ಸಾಲ ನೀಡುವಿಕೆಯ ಪ್ರಮಾಣ ಎರಡಂಕಿಯಲ್ಲಿ ಇದೆ. ಆದರೆ, ಬ್ಯಾಂಕ್‌ ಹೊಸ ಸಾಲ ನೀಡುವಿಕೆಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇರಿಸುತ್ತಿದೆ. ಹೀಗಾಗಿ, ಸಾಲ ನೀಡಿಕೆಯ ಬೆಳವಣಿಗೆ ದರ ಕಡಿಮೆ ಇದೆ ಎಂದು ತಿಳಿಸಿದ್ದಾರೆ. 

ಬ್ಯಾಂಕ್‌ನ ವಸೂಲಾಗದ ಸಾಲದ ಪ್ರಮಾಣ ಶೇ 1.5ರಷ್ಟಾಗಿದ್ದು, ಶೇ 0.10ರಷ್ಟು ಸುಧಾರಣೆ ಕಂಡಿದೆ. ಬ್ಯಾಂಕ್‌ನ ಬಂಡವಾಳ ಮೀಸಲು ಅನುಪಾತ (ಸಿಎಆರ್‌) ಶೇ 14.5ರಷ್ಟಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.