ನವದೆಹಲಿ: ಆನ್‌ಲೈನ್ ಮೂಲಕ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ಅರ್ಹ ಸಾಂಸ್ಥಿಕ ಹೂಡಿಕೆ (ಕ್ಯೂಐಪಿ) ಮೂಲಕ ₹8,500 ಕೋಟಿ ಬಂಡವಾಳ ಸಂಗ್ರಹಿಸಿದೆ.
ದೇಶೀಯ ಮ್ಯೂಚುವಲ್ ಫಂಡ್ ಸಂಸ್ಥೆಗಳಿಗೆ ಈಕ್ವಿಟಿ ಷೇರುಗಳನ್ನು ಮಾರಾಟ ಮಾಡುವ ಮೂಲಕ ಈ ಬಂಡವಾಳ ಸಂಗ್ರಹಿಸಲಾಗಿದೆ ಎಂದು ಕಂಪನಿಯು, ಷೇರುಪೇಟೆಗೆ ತಿಳಿಸಿದೆ.
2021ರ ಜುಲೈನಲ್ಲಿ ಕಂಪನಿಯು ಷೇರುಪೇಟೆಯಲ್ಲಿ ಲಿಸ್ಟಿಂಗ್ ಆದ ಬಳಿಕ ಕ್ಯೂಐಪಿ ಮೂಲಕ ಸಂಗ್ರಹಿಸಿರುವ ಮೊದಲ ಬಂಡವಾಳ ಇದಾಗಿದೆ ಎಂದು ಹೇಳಿದೆ.
ಒಟ್ಟು 33.65 ಕೋಟಿ ಷೇರುಗಳ ಮಾರಾಟಕ್ಕೆ ಕಂಪನಿಯ ಆಡಳಿತ ಮಂಡಳಿಯು ಒಪ್ಪಿಗೆ ನೀಡಿತ್ತು. ಪ್ರತಿ ಷೇರಿಗೆ ₹252.62 ಬೆಲೆ ನಿಗದಿಪಡಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.