ಮುಂಬೈ (ಪಿಟಿಐ): ಹಣಕಾಸು ವಲಯದ ಷೇರುಗಳ ಉತ್ತಮ ಗಳಿಕೆಯಿಂದಾಗಿ ದೇಶದ ಷೇರುಪೇಟೆಗಳಲ್ಲಿ ಗುರುವಾರ ಸಕಾರಾ
ತ್ಮಕ ವಹಿವಾಟು ನಡೆಯಿತು.
ಮುಂಬೈ ಷೇರುಪೇಟೆ (ಬಿಎಸ್ಇ) ಸಂವೇದಿ ಸೂಚ್ಯಂಕ 700 ಅಂಶಗಳಷ್ಟು ಜಿಗಿತ ಕಂಡು 34,208 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಇದರಿಂದಹೂಡಿಕೆದಾರರ ಸಂಪತ್ತು ₹ 1.91 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು,ಷೇರುಪೇಟೆಯ ಬಂಡವಾಳ ಮೌಲ್ಯ ₹ 135 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.
ರಾಷ್ಟ್ರೀಯ ಷೇರುಪೇಟೆ (ಎನ್ಎಸ್ಇ) ಸೂಚ್ಯಂಕ ನಿಫ್ಟಿ210 ಅಂಶ ಹೆಚ್ಚಾಗಿ 10,091ಅಂಶಗಳಿಗೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.