ADVERTISEMENT

ಜನವರಿಯಲ್ಲಿ ಈರುಳ್ಳಿ ದರ ಕೆ.ಜಿ.ಗೆ ₹40ಕ್ಕಿಂತ ಕೆಳಗೆ: ಕೇಂದ್ರ ಸರ್ಕಾರ

ಪಿಟಿಐ
Published 11 ಡಿಸೆಂಬರ್ 2023, 10:17 IST
Last Updated 11 ಡಿಸೆಂಬರ್ 2023, 10:17 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಮುಂದಿನ ವರ್ಷ ಜನವರಿಯಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ ₹40ಕ್ಕಿಂತ ಕೆಳೆಗೆ ಕುಸಿಯುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಅಂದಾಜಿಸಿದ್ದಾಗಿ ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್‌ ಕುಮಾರ್ ಸಿಂಗ್‌ ತಿಳಿಸಿದ್ದಾರೆ.

ಸದ್ಯ ದೇಶದಲ್ಲಿ ಈರುಳ್ಳಿ ದರ ಕೆ.ಜಿಗೆ ಸರಾಸರಿ ₹57.02 ಇದೆ.

ADVERTISEMENT

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಈರುಳ್ಳಿ ದರ ಕೆ.ಜಿಗೆ ₹80 ದಾಟಿದ್ದರಿಂದ ಮುಂದಿನ ವರ್ಷ ಮಾರ್ಚ್ ತಿಂಗಳಾಂತ್ಯದವರೆಗೆ ಈರುಳ್ಳಿ ರಫ್ತು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶಿಸಿತ್ತು.

ಈರುಳ್ಳಿ ದರ ಕೆ.ಜಿಗೆ ₹40ಗಿಂತ ಕೆಳಗಿಳಿಯುವುದು ಯಾವಾಗ ಎನ್ನುವ ಪ್ರಶ್ನೆಗೆ, ‘ಶೀಘ್ರವೇ.. ಜನವರಿಯಲ್ಲಿ...’ ಎಂದು ರೋಹಿತ್‌ ಸಿಂಗ್‌ ಹೇಳಿದ್ದಾರೆ.

‘ಕೆ.ಜಿಗೆ ₹100 ತಲುಪುತ್ತದೆ ಎಂದು ಕೆಲವರು ಹೇಳುತ್ತಾರೆ. ₹60 ದಾಟುವುದಿಲ್ಲ ಎಂದು ನಾವು ಹೇಳಿದ್ದೆವು. ಸದ್ಯ ಇಡೀ ದೇಶದ ಸರಾಸರಿ ಇಂದು ಬೆಳಿಗ್ಗೆ ₹57.02 ಇದೆ. ಇದು ₹60 ದಾಟುವುದಿಲ್ಲ’ ಎಂದಿದ್ದಾರೆ.

ಈರುಳ್ಳಿ ರಫ್ತು ನಿಷೇಧದಿಂದ ಸಣ್ಣ ರೈತರಿಗೆ ತೊಂದರೆಯಾಗುವುದಿಲ್ಲ. ಭಾರತದ ಹಾಗೂ ಬಾಂಗ್ಲಾದೇಶದ ಮಾರುಕಟ್ಟೆಯಲ್ಲಿ ಸಣ್ಣ ಪ್ರಮಾಣದ ಮಾರಾಟಗಾರರು ದರ ವ್ಯತ್ಯಾಸ ಮಾಡಿ ದೌರ್ಜನ್ಯ ಮಾಡುತ್ತಿದ್ದಾರೆ. ದೌರ್ಜನ್ಯ ಮಾಡುತ್ತಿರುವವರು ನಷ್ಟ ಅನುಭವಿಸುತ್ತಾರೆ. ಭಾರತದ ಗ್ರಾಹಕರಿಗೆ ಲಾಭವಾಗಲಿದೆ ಎಂದು ಹೇಳಿದ್ದಾರೆ.

ಖಾರಿಫ್‌ ಬೆಳೆಯಲ್ಲಿ ಈರುಳ್ಳಿ ಉತ್ಪಾದನೆ ಕುಸಿದಿದ್ದರಿಂದ ದರ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಈ ಆರ್ಥಿಕ ವರ್ಷದ ಏಪ್ರಿಲ್‌ 1ರಿಂದ ಆಗಸ್ಟ್‌ 4ರವರೆಗೆ 9.75 ಲಕ್ಷ ಟನ್‌ಗಳಷ್ಟು ಈರುಳ್ಳಿ ರಫ್ತು ಮಾಡಲಾಗಿದೆ. ಬಾಂಗ್ಲಾದೇಶ, ಮಲೇಷ್ಯಾ ಹಾಗೂ ಯುಎಇಗೆ ಹೆಚ್ಚಿನ ಪ್ರಮಾಣದ ಈರುಳ್ಳಿ ರಫ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.